ಚಾಮರಾಜನಗರ: ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲಿ 10ನೇ ತರಗತಿ ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ. ರಾಜ್ಯದಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಕ್ಕಳ ಜೊತೆ ಆಟವಾಡದೆ ಪರೀಕ್ಷೆ ಇಲ್ಲದೇ ಪಾಸ್ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಈಗಿನ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಒಂದು ತಿಂಗಳಿನಿಂದ ಪಾಠವೂ ನಡೆದಿಲ್ಲ. ಹಾಗಾಗಿ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.