alex Certify ರಾಜ್ಯದಲ್ಲೂ SSLC, PUC ಪರೀಕ್ಷೆ ರದ್ದು ಬಗ್ಗೆ ಇಂದು ಸಚಿವ ಸುರೇಶ್ ಕುಮಾರ್ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲೂ SSLC, PUC ಪರೀಕ್ಷೆ ರದ್ದು ಬಗ್ಗೆ ಇಂದು ಸಚಿವ ಸುರೇಶ್ ಕುಮಾರ್ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗುವುದೇ? ಮುಂದೂಡಲಾಗುವುದೇ? ಅಥವಾ ರದ್ದು ಮಾಡಲಾಗುವುದೇ ಎಂಬುದರ ಬಗ್ಗೆ ಸಚಿವರು ಮಾಹಿತಿ ನೀಡಲಿದ್ದಾರೆ.

ಸಿಬಿಎಸ್ಇ ಮಂಡಳಿ ಈಗಾಗಲೇ 10 ನೇ ತರಗತಿ ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಅದೇ ರೀತಿ ಅನೇಕ ರಾಜ್ಯಗಳಲ್ಲಿ ಕೂಡ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದಲ್ಲಿಯೂ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಶಿಕ್ಷಣ ಸಚಿವರು ನಡೆಸಲಿರುವ ಪ್ರೆಸ್ ಮೀಟ್ ಭಾರಿ ಕುತೂಹಲ ಮೂಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...