ಬೆಂಗಳೂರು: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಣೆಗೆ ಸಿದ್ದವಾಗಿದೆ. ಶಿಕ್ಷಣ ಇಲಾಖೆಗೆ ಹೊಸ ಸಚಿವರ ನೇಮಕವಾದ ಕೂಡಲೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಕೊರೊನಾ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿದ್ದು, ಮೌಲ್ಯಮಾಪನದ ನಂತರ ಫಲಿತಾಂಶ ಪ್ರಕಟಣೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸಿದ್ದರಾಗಿದ್ದಾರೆ. ಫಲಿತಾಂಶ ಪ್ರಕಟಣೆಗೆ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಶಿಕ್ಷಣ ಇಲಾಖೆಗೆ ಹೊಸ ಸಚಿವರು ಬಂದ ನಂತರ ಫಲಿತಾಂಶ ಪ್ರಕಟಿಸಲಾಗುವುದು.
ಈಗಾಗಲೇ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದು, ಖಾತೆ ಹಂಚಿಕೆಯಾದ ಕೂಡಲೇ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.