
ಬೆಂಗಳೂರು: ಮೇ 13ರಂದು ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶ ಪ್ರಕಟಿಸುವ ಮೊದಲೇ ಮೇ 12ರೊಳಗೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ನಿರೀಕ್ಷೆ.
ಇದೆ ಮೇ 9, 11 ಅಥವಾ 12ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡು ಫಲಿತಾಂಶದ ಕಂಪ್ಯೂಟರೀಕರಣ ನಡೆಯುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮೇ 10ರ ಮತದಾನಕ್ಕೆ ಮೊದಲು ಅಥವಾ ಮತದಾನದ ನಂತರ ಎಸ್ಎಸ್ಎಲ್ಸಿ ಪರೀಕ್ಷೆ ಪಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಚಿಂತನೆ ನಡೆಸಿದೆ.
ಶುಕ್ರವಾರ ಮೌಲ್ಯಮಾಪನ ಕಾರ್ಯಪೂರ್ಣಗೊಂಡಿದ್ದು, ಫಲಿತಾಂಶವನ್ನು ಕಂಪ್ಯೂಟರ್ ನಲ್ಲಿ ದಾಖಲಿಸಲು ಹಗಲು ರಾತ್ರಿ ತಂಡಗಳಾಗಿ ಕೆಲಸ ಮಾಡಲಾಗುತ್ತಿದೆ. ಮತದಾನಕ್ಕೆ ಮೊದಲೇ ಫಲಿತಾಂಶ ಪ್ರಕಟಿಸಲು ಪ್ರಯತ್ನ ನಡೆದಿದೆ. ಮೇ 9 ರಂದು ಫಲಿತಾಂಶ ನೀಡಲು ಕ್ರಮ ಕೈಗೊಳ್ಳಲಾಗಿದೆ. ಆಗದಿದ್ದರೆ ಮೇ 10ರ ಮತದಾನ ಮುಗಿದ ನಂತರ ಮೇ 13ರ ಫಲಿತಾಂಶಕ್ಕೂ ಮೊದಲು ಮೇ 11 ಇಲ್ಲವೇ 12ರಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.