
ಇತ್ತೀಚಿನ ದಿನಗಳಲ್ಲಿ ತೀರಾ ಚಿಕ್ಕಪ್ರಾಯದವರು ಹಠಾತ್ ವಿಧಿವಶರಾಗುತ್ತಿರುವ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇದೀಗ ಇದಕ್ಕೆ ಮತ್ತೊಂದು ಘಟನೆ ಸೇರ್ಪಡೆಗೊಂಡಿದೆ.
ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಹಪಾಠಿಗಳ ಜೊತೆ ವಾಯು ವಿಹಾರ ಮಾಡುತ್ತಿದ್ದಾಗಲೇ ಏಕಾಏಕಿ ಕುಸಿದು ಬಿದ್ದು ಸಾವಿಗೀಡಾಗಿದ್ದಾಳೆ.
ಇಂತಹದೊಂದು ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದ್ದು, ಬೆಂಗಳೂರಿನ ನಿವಾಸಿ ಪ್ರಭು ಎಂಬುವರ ಪುತ್ರಿ ಫಿಲಿಷ್ ಮೃತಪಟ್ಟಿದ್ದಾಳೆ. ಈಕೆ ಗುಂಡ್ಲುಪೇಟೆಯ ನಿರ್ಮಲ ಕಾನ್ವೆಂಟ್ ನಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.
ವಾಯು ವಿಹಾರ ಮಾಡುವಾಗ ಏಕಾಏಕಿ ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ತಕ್ಷಣವೇ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಳು ಎಂದು ವರದಿಯಾಗಿದೆ.