ಗುರುವಾರದಂದು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಪರೀಕ್ಷೆಯಲ್ಲಿ ಪಾಸ್ ಆಗಿದ್ದ ಸಂತಸದಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ವ್ಯಕ್ತಿಯೊಬ್ಬ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
35 ವರ್ಷದ ಓಂಕಾರಪ್ಪ ಎಂಬಾತ ಈ ಕೃತ್ಯ ಎಸಗಿದ್ದು, ಮೀನಾ ಹತ್ಯೆಗೀಡಾದ ವಿದ್ಯಾರ್ಥಿನಿಯಾಗಿದ್ದಾರೆ. ಅಪ್ರಾಪ್ತ ವಯಸ್ಸಿನ ಈಕೆಯ ನಿಶ್ಚಿತಾರ್ಥ ಓಂಕಾರಪ್ಪ ಜೊತೆ ನಿಗದಿಯಾಗಿತ್ತು ಎನ್ನಲಾಗಿದ್ದು, ಇದು ಮುರಿದು ಬಿದ್ದ ಕಾರಣ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ.
ಕಳೆದ ರಾತ್ರಿ ಸೋಮವಾರಪೇಟೆ ತಾಲೂಕಿನ ಸೊರ್ಲಬ್ಬಿ ಗ್ರಾಮದ ಮೀನಾ ಮನೆಗೆ ನುಗ್ಗಿದ ಹಂತಕ ಆಕೆಯನ್ನು ಮನೆಯಿಂದ ಎಳೆದೊಯ್ದು ರುಂಡ ಕತ್ತರಿಸಿ ಹತ್ಯೆ ಮಾಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.