
ಬೆಳಗಾವಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬರಬಹುದು ಎಂಬ ಆತಂಕದಿಂದಲೇ ವಿದ್ಯಾರ್ಥಿನಿಯೊಬ್ಬಳು ದುಡುಕಿನ ನಿರ್ಧಾರ ಕೈಗೊಂಡಿದ್ದು, ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲೋನಿಯಲ್ಲಿ ವಿದ್ಯಾರ್ಥಿನಿ ಫೇಲ್ ಅಗುವ ಭೀತಿಯಲ್ಲಿ ಸಾವಿಗೆ ಶರಣಾಗಿದ್ದಾಳೆ. ದೀಪಿಕಾ ಬಡಿಗೇರ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಮಾ.25ರಂದು ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿನಿ ಫೇಲ್ ಆಗುವ ಭಯದಲ್ಲಿ ಇದ್ದಳು. ಇದೇ ಭೀತಿಯಲ್ಲಿ ಮನನೊಂದ ವಿದ್ಯಾರ್ಥಿನಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಎಪಿಎಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.