alex Certify ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ‘SSLC’ ವಿದ್ಯಾರ್ಥಿ ಹೃದಯಾಘಾತದಿಂದ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ‘SSLC’ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ತುಮಕೂರು : ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತುಮಕೂರು ತಾಲೂಕಿನ ಚಿಕ್ಕತೊಟ್ಟಿಲು ಕೆರೆ ಬಳಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಭೀಮಾಶಂಕರ್ (15) ಎಂದು ಗುರುತಿಸಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ಗ್ರಾಮದ ನಿವಾಸಿಯಾಗಿದ್ದ ಈತ ತುಮಕೂರು ತಾಲೂಕಿನ ಬೆಳೆದರ ಸರ್ಕಾರಿ ಶಾಲೆಯಲ್ಲಿ 10 ನೇ ತರಗತಿ ವ್ಯಾಸಂಗ ಮಾಡುತ್ತಿದ್ದನು. ನಿನ್ನೆ ಚಿಕ್ಕತೊಟ್ಟಿಲು ಕೆರೆ ಬಳಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ಈತನಿಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮಾರ್ಗಮಧ್ಯೆ ಪ್ರಾಣ ಬಿಟ್ಟಿದ್ದಾನೆ. ಈ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...