
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ನಡೆಸಲಿದ್ದು, ಈ ಬಾರಿ ಹಾಜರಾತಿಯಿಂದ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕ್ರಮಕೈಗೊಂಡಿದೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಕನಿಷ್ಠ ಹಾಜರಾತಿಗೆ ವಿನಾಯಿತಿ ನೀಡಲಾಗಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿಯಮದ ಪ್ರಕಾರ, ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕನಿಷ್ಠ ಶೇಕಡ 75 ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ.
ಕೊರೋನಾ ಕಾರಣದಿಂದ ಈ ಶೈಕ್ಷಣಿಕ ಸಾಲಿನಲ್ಲಿ ತರಗತಿಗಳು ಸರಿಯಾಗಿ ನಡೆಯದ ಹಿನ್ನೆಲೆಯಲ್ಲಿ ಕನಿಷ್ಠ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ. ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಿಂದ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ ಹಾಜರಾಗುವ ಅರ್ಹ ವಿದ್ಯಾರ್ಥಿಗಳನ್ನು ನೊಂದಾಯಿಸಲು ಅರ್ಜಿ ಆಹ್ವಾನಿಸಲಾಗಿದೆ.
ಖಾಸಗಿ ಮತ್ತು ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಲು ಶಾಲೆಗಳ ಮೂಲಕ ಅರ್ಜಿ ಸಲ್ಲಿಸಬಹುದು. ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಳ್ಳಲು ಫೆಬ್ರವರಿ 12 ಕೊನೆಯ ದಿನವಾಗಿದೆ. ಮಾರ್ಚ್ 1 ರಂದು 15 ವರ್ಷ ವಯೋಮಿತಿ ತುಂಬುವ ವಿದ್ಯಾರ್ಥಿಗಳು ಮಾತ್ರ ಖಾಸಗಿಯಾಗಿ ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗಲು ಅವಕಾಶವಿದ್ದು 15 ವರ್ಷದ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ.