ಸೆಪ್ಟೆಂಬರ್ 27 ಹಾಗೂ 29ರಂದು ನಡೆದಿದ್ದ ಪರೀಕ್ಷೆಯಲ್ಲಿ ಒಟ್ಟು 53,155 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯ ಪೂರಕ ಪರೀಕ್ಷೆಯಲ್ಲಿ ರಾಜ್ಯವು 55.54 ಪ್ರತಿಶತ ಫಲಿತಾಂಶ ದಾಖಲಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ವಿದ್ಯಾರ್ಥಿಗಳು http:/.sslc.Karnataka.gov.in ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ಸೆಪ್ಟೆಂಬರ್ 27 ಹಾಗೂ 29ರಂದು ಶಿಫ್ಟ್ ಮಾದರಿಯಲ್ಲಿ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಸಲಾಗಿತ್ತು. ಪ್ರತಿ ವಿಷಯಕ್ಕೆ 40 ಅಂಕಗಳ ಪರೀಕ್ಷೆ ಮಾಡಲಾಗಿತ್ತು. ಹಾಗೂ ಬಹು ಆಯ್ಕೆ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸರಳೀಕೃತ ಮಾದರಿಯಲ್ಲಿ ಪರೀಕ್ಷೆಗಳು ನಡೆದಿದ್ದವು.