BIG NEWS: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಗೆಳತಿ ಅರೆಸ್ಟ್

ನೊಯ್ಡಾ: ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಗೆಳತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ.

23 ವರ್ಷದ ಎಲ್.ಎಲ್.ಬಿ ವಿದ್ಯಾರ್ಥಿ ತಪನ್ ಅಪಾರ್ಟ್ ಮೆಂಟ್ ನ 7ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದ. ಘಟನೆಗೆ ಸಂಬಂಧಿಸಿದಂತೆ ಕುಟುಂಬದವರು ಆತನ ಮಾಜಿ ಪ್ರೇಯಸಿ ವಿರುದ್ಧ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದರು. ಆತ್ಮಹತ್ಯೆ ಪ್ರಚೋದನೆ ಆರೋಪದಲ್ಲಿ ಯುವತಿಯನ್ನು ಬಂಧಿಸಿದ್ದಾರೆ.

ಯುವತಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಲಯ ಪ್ರಕರಣದಲ್ಲಿ ಯಾವುದೇ ಆತ್ಮಹತ್ಯೆ ಪ್ರಚೋದನೆ ಇಲ್ಲ ಎಂದು ಯುವತಿಗೆ ಜಾಮೀನು ಮಂಜೂರು ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read