ಮಂಗಳೂರು: ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ರಾಜ್ಯಾದ್ಯಂತ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಕಾರಿಗಳು ಯಶಸ್ವಿನಿ ಯೋಜನೆಯನ್ನು ಮತ್ತೆ ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದು, ಯೋಜನೆಯ ಮರು ಜಾರಿಗೆ ಸಿದ್ಧತೆ ನಡೆಸಲಾಗಿದೆ. ಅಕ್ಟೋಬರ್ 2 ರ ಗಾಂಧಿ ಜಯಂತಿ ದಿನದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಅಕ್ಟೋಬರ್ 2 ರ ನಂತರ ಯಶಸ್ವಿನಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದು. ಹೈನುಗಾರರಿಗೆ ಅನುಕೂಲವಾಗುವಂತೆ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಆರಂಭಿಸಲಿದ್ದು, ಆರ್‌ಬಿಐ ಅನುಮತಿ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.