ಕೊಲ್ಕತ್ತಾ: ಕೊಲ್ಕತ್ತಾದ ಇತಿಹಾಸಿಕ ಈಡನ್ ಗಾರ್ಡನ್ಸ್ ಸ್ಟೇಡಿಯಂನ ಗ್ಯಾಲರಿ ಒಂದರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ವ್ಯಕ್ತಿಯನ್ನು ಕ್ರೀಡಾಂಗಣದ ಸಿಬ್ಬಂದಿಯ ಪುತ್ರ ಧನಂಜಯ ಬಾರಿಕ್(21) ಎಂದು ಗುರುತಿಸಲಾಗಿದೆ. ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಧನಂಜಯ ಸೋಮವಾರ ಕ್ರೀಡಾಂಗಣದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈತ ಕ್ರೀಡಾಂಗಣದಲ್ಲೇ ಕೆಲಸ ಪಡೆಯಲು ಪ್ರಯತ್ನಿಸುತ್ತಿದ್ದ. ಕೆಲಸ ಸಿಗದ ಕಾರಣ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.