ಬೆಂಗಳೂರು: ಸೇವಾ ಭದ್ರತೆ, ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಗೊಳಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.
ಇದರಿಂದಾಗಿ ರಾಜ್ಯದಲ್ಲಿನ 167 ಡಯಾಲಿಸಿಸ್ ಕೇಂದ್ರಗಳು ಬಂದ್ ಆಗುವ ಸಾಧ್ಯತೆಯಿದ್ದು, ರೋಗಿಗಳು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಕಳೆದ ನಾಲ್ಕು ತಿಂಗಳಿಂದ ವೇತನ ನೀಡಿದ ಕಾರಣ ಜೀವನ ನಿರ್ವಹಣೆಗೆ ತೀವ್ರ ತೊಂದರೆಯಾಗಿದ್ದು, ಅನಿವಾರ್ಯವಾಗಿ ಸೇವೆ ಸ್ಥಗಿತಗೊಳಿಸಿ ಹೋರಾಟ ಕೈಗೊಂಡಿರುವುದಾಗಿ ಸಿಬ್ಬಂದಿ ಹೇಳಿದ್ದಾರೆ.