alex Certify ಭರ್ಜರಿ ಶುಭ ಸುದ್ದಿ: 25 ಸಾವಿರ ಹುದ್ದೆಗಳಿಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಶುಭ ಸುದ್ದಿ: 25 ಸಾವಿರ ಹುದ್ದೆಗಳಿಗೆ ನೇಮಕಾತಿ

ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ(Staff Selection Commission) 25,271 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಸಶಸ್ತ್ರ ಪೊಲೀಸ್ ಪಡೆಗಳಲ್ಲಿನ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.BSF, CISF, SSB, ITBP ಮೊದಲಾದ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಮಹಿಳೆಯರಿಗೆ ಸುಮಾರು 2800 ಕ್ಕೂ ಅಧಿಕ ಹುದ್ದೆಗಳು ಮೀಸಲಾಗಿದೆ.

ಎಸ್ಎಸ್ಎಲ್ಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ಲೈನ್ ಮೂಲಕ ಆಗಸ್ಟ್ 31 ರ ವರೆಗೆ ಅರ್ಜಿಸಲ್ಲಿಸಬಹುದು. ಶುಲ್ಕ ಪಾವತಿಸಲು ಸೆ. 2 ಕೊನೆಯ ದಿನವಾಗಿದೆ. ಕನಿಷ್ಠ 18 ವರ್ಷ ಗರಿಷ್ಠ 23 ವರ್ಷ ವಯೋಮಿತಿ ನಿಗದಿಪಡಿಸಿದ್ದು, ವಿವಿಧ ವರ್ಗದವರಿಗೆ ಸಡಿಲಿಕೆ ಇದೆ. https://SSC.nic.in ವೆಬ್ಸೈಟ್ ನಲ್ಲಿ ಮತ್ತು ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...