ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋದೇವಿ ದೇಗುಲ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ.
ಸಮುದಾಯ ಆರೋಗ್ಯ ಕೇಂದ್ರದ ಬ್ಲಾಕ್ ವೈದ್ಯಾಧಿಕಾರಿ ಡಾ.ಗೋಪಾಲ್ ದತ್ ಉಲ್ಲೇಖಿಸಿ ಈ ಬಗ್ಗೆ ವರದಿಯಾಗಿದೆ. ದತ್ ಪ್ರಕಾರ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುಗಳನ್ನು ನರೈನಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
20 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಶನಿವಾರ ಕಾಲ್ತುಳಿತ ಸಂಭವಿಸಿದೆ. ಹೊಸ ವರ್ಷಾಚರಣೆಯಂದು ಭಕ್ತರ ದಂಡು ಹರಿದು ಬಂದಿರುವುದೇ ಘಟನೆಗೆ ಕಾರಣ ಎನ್ನಲಾಗಿದೆ.