ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಗೋವಾ, ಹೈದರಾಬಾದ್, ತಿರುಪತಿಗೆ ನವೆಂಬರ್ 21ರಿಂದ ವಿಮಾನ ಸಂಚಾರ ಆರಂಭವಾಗಲಿದೆ. ಸ್ಟಾರ್ ಏರ್ ಸಂಸ್ಥೆ ವಿಮಾನ ಸಂಚಾರಕ್ಕೆ ಸಿದ್ಧತೆ ಮಾಡಿಕೊಂಡಿದೆ.
ಈಗಾಗಲೇ ಇಂಡಿಗೋ ವಿಮಾನ ಶಿವಮೊಗ್ಗ -ಬೆಂಗಳೂರು ನಡುವೆ ಸಂಚರಿಸುತ್ತಿದ್ದು, ಸ್ಟಾರ್ ಏರ್ ಸಂಸ್ಥೆ ಹೈದರಾಬಾದ್, ಗೋವಾ ಮತ್ತು ತಿರುಪತಿಗೆ ವಿಮಾನ ಸೇವೆ ಒದಗಿಸಲಿದೆ. ಈಗಾಗಲೇ ಟಿಕೆಟ್ ಬುಕಿಂಗ್ ಆರಂಭವಾಗಿದ್ದು, ಸ್ಟಾರ್ ಏರ್ ಸಂಸ್ಥೆಯ ಬಸ್ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದರಿಂದಾಗಿ ಶಿವಮೊಗ್ಗ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.