alex Certify BIG NEWS : ಬೆಂಗಳೂರಿನಲ್ಲಿ ರಾಜ್ಯ ‘ಬಿಜೆಪಿ ಕೋರ್ ಕಮಿಟಿ’ ಸಭೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಬೆಂಗಳೂರಿನಲ್ಲಿ ರಾಜ್ಯ ‘ಬಿಜೆಪಿ ಕೋರ್ ಕಮಿಟಿ’ ಸಭೆ ಆರಂಭ

ಬೆಂಗಳೂರು : ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಹಾಗೂ ಬಸವರಾಜ ಬೊಮ್ಮಾಯಿ ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಭೆಯಲ್ಲಿ ರಾಜ್ಯದ ಬಿಜೆಪಿ ನಾಯಕರು ಮಾತ್ರ ಭಾಗಿಯಾಗಿದ್ದಾರೆ. 5 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ಬ್ಯುಸಿಯಾಗಿರುವ ಹಿನ್ನೆಲೆ ಸಭೆಯಲ್ಲಿ ರಾಜ್ಯದ ಬಿಜೆಪಿ ನಾಯಕರು ಮಾತ್ರ ಸಭೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲೋಕಸಭೆ ಚುನಾವಣೆಗೆ ತಯಾರಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸಲಿದ್ದಾರೆ. ಅದೇ ರೀತಿ ರಾಜ್ಯಕಾರಣದಲ್ಲಿ ಸುದ್ದಿಯಾಗುತ್ತಿರುವ ಆಪರೇಷನ್ ಹಸ್ತದ ಬಗ್ಗೆ ಚರ್ಚೆ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...