BREAKING : ರಾಜ್ಯದ 5, 8, 9, 11 ನೇ ತರಗತಿಗೆ ಬೋರ್ಡ್ ಪರೀಕ್ಷೆ : ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ಬೆಂಗಳೂರು : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ರಾಜ್ಯದ 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಅಸ್ತು ಎಂದಿತ್ತು, ಇದೀಗ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಮೇಲ್ಮನವಿ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ನಡೆ ನೀಡಿತ್ತು. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚನೆ ನೀಡಿತ್ತು. ವಾದ ಪ್ರತಿವಾದ ಆಲಿಸಿದ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿತ್ತು. ನಂತರ ಹೈಕೋರ್ಟ್ ರಾಜ್ಯದ 5, 8, 9,11 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಅಸ್ತು ಎಂದಿತ್ತು, ಇದೀಗ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠವು ತಡೆಯಾಜ್ಞೆ ನೀಡಿದೆ. ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಮತ್ತೆ ಆರಂಭಗೊಂಡ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸುವುದನ್ನು ತಡೆಹಿಡಿದಿದೆ.

ಸ್ಥಗಿತಗೊಂಡಿದ್ದ ಪರೀಕ್ಷೆ ಮುಂದುವರೆಸಲು ಹೈಕೋರ್ಟ್ ಆದೇಶ ಹೊರಡಿಸಿದೆ. ಮುಂದಿನ ವರ್ಷದ ಪರೀಕ್ಷೆಯ ವೇಳೆಯೊಳಗೆ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಲು ಹೈಕೋರ್ಟ್ ಶಿಕ್ಷಣ ಇಲಾಖೆಗೆ ಸೂಚನೆ ನೀಡಿತ್ತು. ಅಂತೆಯೇ ರಾಜ್ಯದಲ್ಲಿ ಪರೀಕ್ಷೆ ನಡೆದಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read