alex Certify ಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಜನಪ್ರಿಯ ಯೋಜನೆ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಜನಪ್ರಿಯ ಯೋಜನೆ ಘೋಷಣೆ ಸಾಧ್ಯತೆ

ಹುಬ್ಬಳ್ಳಿ: ಫೆ. 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು. ಹಣಕಾಸು ಖಾತೆ ಹೊಂದಿರುವ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಫೆಬ್ರವರಿ ಮೂರನೇ ವಾರ ಬಜೆಟ್ ಮಂಡಿಸುವುದಾಗಿ ಅವರು ತಿಳಿಸಿದ್ದಾರೆ.

ಚುನಾವಣೆ ಸಮೀಪದಲ್ಲಿ ಇರುವುದರಿಂದ ಈ ಬಾರಿ ಬಜೆಟ್ ನಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ. ಬಜೆಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ನಿನ್ನೆ ಸಂಜೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಕಳೆದ ಬಜೆಟ್ ನಲ್ಲಿ ಘೋಷಣೆಯಾದ ಯೋಜನೆಗಳ ಅನುಷ್ಠಾನ, ಅನುದಾನ ಕುರಿತಾಗಿ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳೊಂದಿ ಚರ್ಚೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...