ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಮಹತ್ವಾಕಾಂಕ್ಷಿ ರಾಜ್ಯ ಬಜೆಟ್ ಮಂಡಿಸಲಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ಅವರು 14 ನೇ ಬಾರಿಗೆ ರಾಜ್ಯ ಸರ್ಕಾರದ ಆಯವ್ಯಯ ಮಂಡಿಸಿ ದಾಖಲೆ ನಿರ್ಮಿಸುತ್ತಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ದೂರ ದೃಷ್ಟಿ ಆಲೋಚನೆಗಳನ್ನು ಕ್ರೂಢೀಕರಿಸಿ ಮಹತ್ವದ ಬಜೆಟ್ ಮಂಡನೆ ಮಾಡಲಿದ್ದು, ರಾಜ್ಯದ ಜನರ ಚಿತ್ತ ಸಿಎಂ ಸಿದ್ದರಾಮಯ್ಯರತ್ತ ನೆಟ್ಟಿದೆ.
ಚುನಾವಣೆಗೂ ಮುನ್ನ ರಾಜ್ಯ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದ್ದು, ಕೊಟ್ಟ ಭರವಸೆಯಂತೆ ಅಂಗನವಾಡಿ, ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳ ಮಾಡಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆಗೆ ಬಜೆಟ್ ಪೂರ್ವ ತಯಾರಿ ಸಭೆಗಳನ್ನು ನಡೆಸಿದ್ದು, ಇದೀಗ ಅಂತಿಮ ಟಚ್ ನೀಡುತ್ತಿದ್ದಾರೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದು ನಿರ್ಣಯಕ ಬಜೆಟ್ ಆಗಿದ್ದು, ಜನಪ್ರಿಯ ಘೋಷಣೆ, ಚುನಾವಣಾ ಲಾಭ ತರುವ ಆಯವ್ಯಯ ಮಂಡಿಸಲು ಸಿಎಂ ತಯಾರಿ ನಡೆಸಿದ್ದಾರೆ.