ಬೆಂಗಳೂರು : ಅಕ್ಟೋಬರ್ 19 ರಂದು ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.
ಗುರುವಾರ ಮಧ್ಯಾಹ್ನ 3:00 ಗಂಟೆಗೆ ಸಚಿವ ಸಂಪುಟದ 2023ನೇ ಸಾಲಿನ 11 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಡಿಸೆಂಬರ್ 4 ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ ಮೂಲಗಳು ತಿಳಿಸಿವೆ.
ಡಿಸೆಂಬರ್ 3 ರಂದು ಪಂಚ ರಾಜ್ಯಗಳ ವಿಧಾನಸಬೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದ ಬೆನ್ನಲ್ಲೇ ಡಿಸೆಂಬರ್ 4 ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ನಾಳೆ ಚರ್ಚೆ ನಡೆಯಲಿದೆ.
ಲೋಕಸಭೆ ಚುನಾವಣೆ, ವಿಪಕ್ಷಗಳ ಟೀಕೆ, ಅನುದಾನ ಬಿಡುಗಡೆ ಸೇರಿದಂತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ.