alex Certify ನಾಳೆ ಸಿಎಂ ನೇತೃತ್ವದಲ್ಲಿ ರಾಜ್ಯ ‘ಸಚಿವ ಸಂಪುಟ ಸಭೆ’ : ಚಳಿಗಾಲ ಅಧಿವೇಶನ ಕುರಿತು ಚರ್ಚೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಸಿಎಂ ನೇತೃತ್ವದಲ್ಲಿ ರಾಜ್ಯ ‘ಸಚಿವ ಸಂಪುಟ ಸಭೆ’ : ಚಳಿಗಾಲ ಅಧಿವೇಶನ ಕುರಿತು ಚರ್ಚೆ..!

ಬೆಂಗಳೂರು :  ಅಕ್ಟೋಬರ್ 19 ರಂದು ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.

ಗುರುವಾರ ಮಧ್ಯಾಹ್ನ 3:00 ಗಂಟೆಗೆ ಸಚಿವ ಸಂಪುಟದ 2023ನೇ ಸಾಲಿನ 11 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಡಿಸೆಂಬರ್ 4 ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ ಮೂಲಗಳು ತಿಳಿಸಿವೆ.

ಡಿಸೆಂಬರ್ 3 ರಂದು ಪಂಚ ರಾಜ್ಯಗಳ ವಿಧಾನಸಬೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದ ಬೆನ್ನಲ್ಲೇ ಡಿಸೆಂಬರ್ 4 ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ ನಾಳೆ ಚರ್ಚೆ ನಡೆಯಲಿದೆ.
ಲೋಕಸಭೆ ಚುನಾವಣೆ, ವಿಪಕ್ಷಗಳ ಟೀಕೆ, ಅನುದಾನ ಬಿಡುಗಡೆ ಸೇರಿದಂತೆ ಗ್ಯಾರಂಟಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದ್ದು, ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...