alex Certify BIG NEWS: 6 ಜಿಲ್ಲೆಯಲ್ಲಿ ಅಧಿಕ, ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಇಳಿಕೆ -ಇಲ್ಲಿದೆ ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 6 ಜಿಲ್ಲೆಯಲ್ಲಿ ಅಧಿಕ, ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಇಳಿಕೆ -ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1301 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,44,764 ಕ್ಕೆ ಏರಿಕೆಯಾಗಿದೆ.

ಇಂದು 17 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 37,248 ಜನ ಸಾವನ್ನಪ್ಪಿದ್ದಾರೆ. ಇವತ್ತು 1614 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,88,520 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ

ರಾಜ್ಯದಲ್ಲಿ 18,970 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,86,900 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.69 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 386 ಜನರಿಗೆ ಸೋಂಕು ತಗುಲಿದ್ದು, 386 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. 7341 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ:

ಬೆಂಗಳೂರು 386, ದಕ್ಷಿಣಕನ್ನಡ 248, ಹಾಸನ 117, ಕೊಡಗು 78, ಮೈಸೂರು 72, ಶಿವಮೊಗ್ಗ 62, ಉಡುಪಿ 106 ಪ್ರಕರಣ ವರದಿಯಾಗಿದೆ.

ಬಾಗಲಕೋಟೆ 1, ಬಳ್ಳಾರಿ 5, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 2, ಚಿತ್ರದುರ್ಗ 5, ಧಾರವಾಡ 6, ಗದಗ 1, ಹಾವೇರಿ 4, ಕಲಬುರ್ಗಿ 7, ಕೊಪ್ಪಳ 1, ರಾಯಚೂರು 0, ರಾಮನಗರ 3, ವಿಜಯಪುರ 4, ಯಾದಗಿರಿ 1 ಪ್ರಕರಣ ವರದಿಯಾಗಿದೆ.

ಮೃತರ ಸಂಖ್ಯೆ:

ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 2, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 1, ಧಾರವಾಡ 1, ಹಾಸನ 3, ಕೊಡಗು 2, ಮೈಸೂರು 2, ಶಿವಮೊಗ್ಗ 1, ತುಮಕೂರು 1, ಉಡುಪಿ 1 ಸೇರಿ ರಾಜ್ಯದಲ್ಲಿ 17 ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...