ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 973 ಜನರಿಗೆ ಸೋಂಕು ತಗುಲಿದ್ದು, 1324 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
15 ಜನ ಸೋಂಕಿತರು ಮೃತಪಟ್ಟಿದ್ದಾರೆ. 18,392 ಸಕ್ರಿಯ ಪ್ರಕರಣಗಳಿವೆ. ಇವತ್ತು 1,51,219 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.64 ರಷ್ಟು ಇದೆ.
ರಾಜಧಾನಿ ಬೆಂಗಳೂರಿನಲ್ಲಿ 264 ಜನರಿಗೆ ಸೋಂಕು ತಗುಲಿದ್ದು, 261 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮೂರು ಜನ ಸೋಂಕಿತರು ಮೃತಪಟ್ಟಿದ್ದಾರೆ. 7343 ಸಕ್ರಿಯ ಪ್ರಕರಣಗಳಿವೆ.