
ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,222 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,07,123 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 8 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,989 ಕ್ಕೆ ಏರಿಕೆಯಾಗಿದೆ. ಇದುವರೆಗೆ 8,79,735 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, 15,380 ಜನ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.