alex Certify BREAKING: ರಾಜ್ಯದಲ್ಲಿಂದು 1005 ಜನರಿಗೆ ಸೋಂಕು ದೃಢ -5 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 1005 ಜನರಿಗೆ ಸೋಂಕು ದೃಢ -5 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1005 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,14,488 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,044 ಜನ ಸಾವನ್ನಪ್ಪಿದ್ದಾರೆ. 8,88,917 ಗುಣಮುಖರಾಗಿ ಬಿಡುಗಡೆಯಾಗಿದ್ದು, 13,508 ಜನರಿಗೆ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು 578 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸಂಖ್ಯೆ 3,85,586 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 4 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 4287 ಜನ ಮೃತಪಟ್ಟಿದ್ದಾರೆ. 3,72,479 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 8819 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...