alex Certify BIG NEWS: ರಾಜ್ಯದಲ್ಲಿಂದು 39305 ಜನರಿಗೆ ಸೋಂಕು, 596 ಮಂದಿ ಸಾವು: ಇಲ್ಲಿದೆ ಜಿಲ್ಲಾವಾರು ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 39305 ಜನರಿಗೆ ಸೋಂಕು, 596 ಮಂದಿ ಸಾವು: ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 39,305 ಜನರಿಗೆ ಸೋಂಕು ತಗಲಿದೆ. ಇವತ್ತು ಒಂದೇ ದಿನ 596 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿಂದು 32,188 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 13,83,285 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,71,006 ಏರಿಕೆಯಾಗಿದೆ. ಇದುವರೆಗೆ ರಾಜ್ಯದಲ್ಲಿ 19,372 ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟು ಪ್ರಕರಣಗಳ ಸಂಖ್ಯೆ 19,73,683 ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 16,747 ಜನರಿಗೆ ಸೋಂಕು ತಗಲಿದೆ. ಇವತ್ತು ಒಂದೇ ದಿನ 374 ಮತ್ತು ಸೋಂಕಿತರು ಮೃತಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,52,454 ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...