alex Certify BIG SHOCKING: ರಾಜ್ಯದಲ್ಲಿ ಮತ್ತೆ ಕೊರೋನಾ ಸ್ಪೋಟ – ಒಂದೇ ದಿನ 932 ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿ ಮತ್ತೆ ಕೊರೋನಾ ಸ್ಪೋಟ – ಒಂದೇ ದಿನ 932 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗಿದೆ. ಇಂದು ಹೊಸದಾಗಿ 932 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,61,204 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 12,397 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು 429 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,39,928 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 8860 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಪೋಟವಾಗಿದೆ. ಹೊಸದಾಗಿ 550 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸಂಖ್ಯೆ 4,11,989 ಕ್ಕೆ ಏರಿಕೆಯಾಗಿದೆ. ಇವತ್ತು 5 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4524 ಜನ ಸಾವನ್ನಪ್ಪಿದ್ದಾರೆ. 6454 ಸಕ್ರಿಯ ಪ್ರಕರಣಗಳಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...