ಬೆಂಗಳೂರು: ರಾಜ್ಯದಲ್ಲಿ ಇಂದು 1196 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,01,410 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು 5 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,944 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 2036 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 8,72,038 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 17,409 ಸಕ್ರಿಯ ಪ್ರಕರಣಗಳಿವೆ. 260 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.