alex Certify BIG NEWS: ರಾಜ್ಯದಲ್ಲಿ 6057 ಸೋಂಕಿತರಿಗೆ ಚಿಕಿತ್ಸೆ, 528 ಜನರಿಗೆ ಹೊಸದಾಗಿ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ 6057 ಸೋಂಕಿತರಿಗೆ ಚಿಕಿತ್ಸೆ, 528 ಜನರಿಗೆ ಹೊಸದಾಗಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 528 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,52,565 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 413 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,34,143 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು ಮೂವರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,346 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6057 ಸಕ್ರಿಯ ಪ್ರಕರಣಗಳಿದ್ದು, 116 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 311 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 4,06,440 ಕ್ಕೆ ಏರಿಕೆಯಾಗಿದೆ. ಇಂದು 235 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 3,97,665 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 4285 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 4489 ಜನ ಸೋಂಕಿತರು ಇದುವರೆಗೆ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...