alex Certify BIG NEWS: ರಾಜ್ಯದಲ್ಲಿಂದು 388 ಜನರಿಗೆ ಸೋಂಕು, ಮೂವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿಂದು 388 ಜನರಿಗೆ ಸೋಂಕು, ಮೂವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 388 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಮೂವರು ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,220 ಜನ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 471 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,21,592 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 9,39,775 ಕ್ಕೆ ಏರಿಕೆಯಾಗಿದೆ. 5944 ಸಕ್ರಿಯ ಪ್ರಕರಣಗಳಿದ್ದು, 145 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 3,99,087 ಕ್ಕೆ ಏರಿಕೆಯಾಗಿದೆ. ಇಂದು 246 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 3,90,913 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 3780 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಂದು ಇಬ್ಬರು ಮೃತಪಟ್ಟಿದ್ದು, ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4393 ಕ್ಕೆ ಏರಿಕೆಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...