
ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 3176 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 47,253 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು ಒಂದೇ ದಿನ 87 ಮಂದಿ ಮೃತಪಟ್ಟಿದ್ದು, ಇದುವರೆಗೆ 929 ಮಂದಿ ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಬ್ಲಾಸ್ಟ್ ಆಗಿದ್ದು 1975 ಜನರಿಗೆ ಸೋಂಕು ತಗುಲಿದೆ. ಇವತ್ತು ಒಂದೇ ದಿನ 60 ಮಂದಿ ಸಾವನ್ನಪ್ಪಿದ್ದಾರೆ.
