
ಬೆಂಗಳೂರು: ರಾಜ್ಯದಲ್ಲಿ ಇಂದು 2116 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,55,912 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇವತ್ತು 21 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 11,474 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 8,14,949 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 29,470 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು 1069 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಸೋಂಕಿತರ ಸಂಖ್ಯೆ 3,54,215 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 8 ಮಂದಿ ಸಾವನ್ನಪ್ಪಿದ್ದು, ಇದುವರೆಗೆ 3,985 ಜನ ಮೃತಪಟ್ಟಿದ್ದಾರೆ. 3,32,287 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 17,942 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.