
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ಎಲ್ಲಾ ಹಂತದ ಚುನಾವಣೆ ಪ್ರಕ್ರಿಯೆಗಳು ಚಾಲ್ತಿಯಲ್ಲಿದ್ದು, ಅಧಿಸೂಚನೆ ಹಾಗೂ ವೇಳಾಪಟ್ಟಿಯಂತೆ ತಮ್ಮ ಶಾಖೆಗಳ ಎಲ್ಲಾ ಹಂತದ ಚುನಾವಣೆ ಪ್ರಕ್ರಿಯೆಗಳು ಕೈಗೊಳ್ಳಲು ಕರ್ನಾಟಕ ರಾಜ್ಯ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಚುನಾವಣಾಧಿಕಾರಿಯಾದ ಎ.ಹನುಮನರಸಯ್ಯ, ಉಪಕಾರ್ಯದರ್ಶಿ(ನಿ) ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಅವರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಯ ತಾಲ್ಲೂಕು ಶಾಖೆ, ಯೋಜನಾ ಶಾಖೆ, ಜಿಲ್ಲಾ ಶಾಖೆಗಳ ನಿರ್ದೇಶಕರು & ಪದಾಧಿಕಾರಿಗಳ ಚುನಾವಣೆ ಹಾಗೂ ಬೆಂಗಳೂರು ನಗರ ಜಿಲ್ಲೆಯ ರಾಜ್ಯಪರಿಷತ್ ಸದಸ್ಯರ & ರಾಜ್ಯ ಸಂಘದ ಪದಾಧಿಕಾರಿಗಳ ಚುನಾವಣೆಗಳನ್ನು ಸಂಘದ ಶಾಖೆಗಳು ನಿಗಧಿಪಡಿಸುವ ಸ್ಥಳದಲ್ಲಿ ನಿಗದಿತ ದಿನಾಂಕಗಳಂತೆ ಚುನಾವಣೆಗಳನ್ನು ನಡೆಸಲು ಚುನಾವಣಾ ಆಧಿಸೂಚನೆಯನ್ನು ಹೊರಡಿಸಿರುತ್ತಾರೆ.



