
ಬೆಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಖಂಡಿಸಿ ಫೆಬ್ರವರಿ 23 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಹರ್ಷ ಹತ್ಯೆ ಪ್ರಕರಣ ಖಂಡಿಸಿ ಹಾಗೂ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಫೆಬ್ರುವರಿ 23ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎನ್ನಲಾಗಿದೆ.
ಭಾನುವಾರ ರಾತ್ರಿ ಶಿವಮೊಗ್ಗದ ಭಾರತಿ ಕಾಲೋನಿಯಲ್ಲಿ ಹರ್ಷನನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಲಾಗಿದ್ದು, ನಂತರ ಶಿವಮೊಗ್ಗದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಕಲ್ಲು ತೂರಾಟ ನಡೆಸಲಾಗಿದ್ದು, ಅಂಗಡಿ ಮುಂಗಟ್ಟುಗಳು, ಮನೆ, ವಾಹನಗಳಿಗೆ ಹಾನಿ ಮಾಡಲಾಗಿದೆ.