
ಬೆಂಗಳೂರು: ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ್ ದಳವಾಯಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಆಯೋಗದ ಸದಸ್ಯರಾಗಿ ಬಳ್ಳಾರಿಯ ಎಸ್.ಆರ್. ಗಾದಿಲಿಂಗನಗೌಡ, ಕೊಪ್ಪಳದ ಡಿ.ಹೆಚ್. ಪೂಜಾರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವಲ್ಲಿ ರಾಜ್ಯ ಸರ್ಕಾರ ಮತ್ತು ರೈತರ ನಡುವೆ ಕರ್ನಾಟಕ ಕೃಷಿ ಬೆಲೆ ಆಯೋಗ ಕಾರ್ಯ ನಿರ್ವಹಿಸುತ್ತಿದೆ.