alex Certify ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮತ್ತೆ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭಕ್ಕೆ ಗ್ರೀನ್ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮತ್ತೆ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ(ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

2024-25ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿ ಅನುಮತಿ ನೀಡಲಾಗಿತ್ತು. ಬೇಡಿಕೆ ಪರಿಗಣಿಸಿ ಕನಿಷ್ಠ 100 ವಿದ್ಯಾರ್ಥಿಗಳಿರುವ 373 ಶಾಲೆಗಳಿಗೆ ಅನುಮತಿ ನೀಡಲಾಗಿದೆ.

ಬೆಂಗಳೂರು ದಕ್ಷಿಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ಶಿರಸಿ, ಮೈಸೂರು, ಹಾಸನ, ವಿಜಯಪುರ ಮತ್ತು ಚಿಕ್ಕಮಗಳೂರಿನ ಶಾಲೆಗಳಿಗೆ ಅನುಮತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...