ಬೆಂಗಳೂರು: ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ.
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ʼಮಕ್ಕಳ ವಿಶೇಷ ಗ್ರಾಮಸಭೆʼ, ಮಕ್ಕಳ ಜನನ ನೋಂದಣಿ, ಪೌಷ್ಟಿಕತೆಯ ಕುರಿತು ಜಾಗೃತಿ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಅಭಿಯಾನಗಳು, ಮಕ್ಕಳ ಕ್ರೀಡಾಕೂಟಗಳು, ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ.
ಜೊತೆಗೆ ಮಕ್ಕಳ ಬೇಡಿಕೆ / ಪ್ರಶ್ನೆ / ದೂರುಗಳನ್ನು ʼಮಕ್ಕಳ ದನಿ ಪೆಟ್ಟಿಗೆʼಯ ಮೂಲಕ ಸ್ವೀಕರಿಸಿ, ಮಕ್ಕಳ ವಿಶೇಷ ಗ್ರಾಮಸಭೆಯಲ್ಲಿ ಚರ್ಚಿಸಿ ಪರಿಹರಿಸಲಾಗುತ್ತಿದೆ. ಗ್ರಾಮೀಣ ಮಕ್ಕಳ ಅಭ್ಯುದಯಕ್ಕೆ ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದು ಹೇಳಲಾಗಿದೆ.