ಬೆಂಗಳೂರು : 2022-23ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ತುಮಕೂರು ನಲ್ಲಿ ದಿನಾಂಕ:27-10-2023 ರಿಂದ 29-10- 2023ರವರೆಗೆ (ಮೂರು ದಿನ) ನಡೆಸಲು ತೀರ್ಮಾನಿಸಲಾಗಿರುತ್ತದೆ. ಸದರಿ ಕ್ರೀಡಾಕೂಟವನ್ನು ಈ ಕೆಳಕಂಡಂತೆ ಆಯೋಜಿಸಲು ಸೂಚಿಸಿ ಸುತ್ತೋಲೆಯನ್ನು ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಲು ನಿಯಮಾವಳಿಗಳು:
- ಸದರಿಕ್ರೀಡಾಕೂಟದಲ್ಲಿರಾಜ್ಯ ಸರ್ಕಾರದ ಎಲ್ಲಾ ಖಾಯಂ ನೌಕರರು ಭಾಗವಹಿಸಲು
- ಯುವಸಬಲೀಕರಣಮತ್ತು ಕ್ರೀಡಾ ಇಲಾಖೆಯಲ್ಲಿನ ತರಬೇತುದಾರರು, ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರು. ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಕ್ರೀಡಾಕೋಟದಡಿ ನೇಮಕಗೊಂಡ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
- ಎಲ್ಲಾಕ್ರೀಡಾಪಟುಗಳು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಕ್ರೀಡೆಯಲ್ಲಿ ಭಾಗವಹಿಸಲು ನೀಡಿರುವ ಅಧಿಕೃತ ಗುರುತಿನ ಚೀಟಿ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
- ಸಂಗೀತ, ನೃತ್ಯ ಮತ್ತು ಕಲಾ ಶಿಕ್ಷಕರು, ಸಂಗೀತ, ನೃತ್ಯ ಮತ್ತು ಕರಕುಶಲ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುವುದಿಲ್ಲ.
- ದಿನಗೂಲಿನೌಕರರು, ಅರೆಕಾಲಿಕನೌಕರರು, ಕ್ಷೇಮಾಭಿವೃದ್ಧಿ ನೌಕರರು, ಗುತ್ತಿಗೆ ನೌಕರರು, ನಿಗಮ/ಮಂಡಳಿ ನೌಕಕರು ಮತ್ತು ಇತರೇ ಖಾಯಂ ಅಲ್ಲದ ನೌಕರರು ಭಾಗವಹಿಸಲು ಅರ್ಹರಾಗಿರುವುದಿಲ್ಲ.
- ಅರಣ್ಯಇಲಾಖೆಗಳಲ್ಲಿ ಸಮವಸ್ತ್ರ, ವೃಂದಕ್ಕೆ ಪ್ರತ್ಯೇಕ ಕ್ರೀಡಾಕೂಟಗಳಿರುವುದರಿಂದ ಈ ಎರಡೂ ಇಲಾಖೆಗಳ ಕಛೇರಿ ಹಾಗೂ ಲಿಪಿಕ ನೌಕರರು/ಕಛೇರಿ ಸಿಬ್ಬಂದಿ ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿದೆ.
- ಸರ್ಕಾರಿನೌಕರರ ಕ್ರೀಡಾಕೂಟದಲ್ಲಿ ಅಬಕಾರಿ, ಅರಣ್ಯ, ಅಗ್ನಿಶಾಮಕ ಇಲಾಖೆಗಳ ಕ್ರೀಡಾಕೋಟಾದಡಿ ಅವಕಾಶವಿರುವುದಿಲ್ಲ. ನೇಮಕವಾದ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿರುವಿದಲ್ಲ.
- 1 ಟ್ರ್ಯಾಕ್ಮತ್ತು2 ಫೀಲ್ಡ್ ಅಥವಾ 2 ಟ್ರಾಕ್ ಮತ್ತು 1 ಫೀಲ್ಡ್ ಸೇರಿ. ಒಟ್ಟು ಮೂರು ಆಟಗಳಲ್ಲಿ ಮಾತ್ರ ಭಾಗವಹಿಸತಕ್ಕದ್ದು.
- 45 ವರ್ಷಮೇಲ್ಪಟ್ಟ ಸ್ಪರ್ಧಿಗಳು 45 ವರ್ಷಕ್ಕೊಳಪಟ್ಟವರಿಗೆ ಇರುವ ಸ್ಪರ್ಧೆಗಳಲ್ಲಿ ಸ್ವಂತ ಜವಾಬ್ದಾರಿ ಮೇಲೆ ಭಾಗವಹಿಸಬಹುದು. 45 ವರ್ಷಕ್ಕೊಳಪಟ್ಟವರು 45 ವರ್ಷ ಮೇಲ್ಪಟ್ಟವರ ಜೊತೆಯಲ್ಲಿ ಭಾಗವಹಿಸಲು ಅವಕಾಶವಿರುವುದಿಲ್ಲ.
- ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ, ತಕರಾರಿಗೆ ಅವಕಾಶವಿರುವುದಿಲ್ಲ.