alex Certify BIG NEWS: ಸುವರ್ಣ ವಿಧಾನಸೌಧದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ; ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಧರಣಿ; ಅಧಿವೇಶನ ಆರಂಭಕ್ಕೂ ಮುನ್ನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುವರ್ಣ ವಿಧಾನಸೌಧದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಕೆ; ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಧರಣಿ; ಅಧಿವೇಶನ ಆರಂಭಕ್ಕೂ ಮುನ್ನವೇ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಿರುವುದನ್ನು ವಿರೋಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಇಂದಿನಿಂದ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಅಧಿವೇಶನ ಆರಂಭಕ್ಕೂ ಮುನ್ನ ಸಾರ್ವಕರ್, ಅಂಬೆಡ್ಕರ್ ಸೇರಿದಂತೆ ಹಲವು ಮಹನಿಯರ ಭಾವಚಿತ್ರವನ್ನು ವಿಧಾನಸೌಧದ ಒಳಗೆ ಅನಾವರಣ ಮಾಡಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ. ಸಾವರ್ಕರ್ ಭಾವಚಿತ್ರವನ್ನು ವಿಧಾನಸೌಧದ ಒಳಗೆ ಅನಾವರಣ ಮಾಡುತ್ತಿರುವ ಬಿಜೆಪಿ ಕ್ರಮ ಖಂಡಿಸಿ ವಿಪಕ್ಷ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.

ಸುವರ್ಣವಿಧಾನಸೌಧದ ಮುಖ್ಯದ್ವಾರದಲ್ಲಿ ಮೆಟ್ಟಿಲುಗಳ ಮೇಲೆ ಕುಳಿತು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಸಾವರ್ಕರ್ ಫೋಟೋ ಯಾಕೆ ಹಾಕಿದ್ದು ಎಂದು ಪ್ರಶ್ನಿಸಬೇಡಿ. ನಾವು ಸೂಚಿಸಿದ್ದ ದಾರ್ಶನಿಕರ ಫೋಟೋ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿ ಎಂದು ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸಮಾಜ ಸುಧಾರಣೆಗೆ ಶ್ರಮಿಸಿದ ಮಹನೀಯರ ಫೋಟೋ ಅಳವಡಿಸಬೇಕು ಎಂದು ಒತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...