alex Certify ರಾಜ್ಯ ಸರ್ಕಾರದಿಂದ ‘ಕನ್ನಡ ಪುಸ್ತಕ ಸೊಗಸು’ ಬಹುಮಾನಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ ‘ಕನ್ನಡ ಪುಸ್ತಕ ಸೊಗಸು’ ಬಹುಮಾನಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ  :   ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022-2023 ಮತ್ತು 2024 ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟ ಪರಿಗಣಿಸಿ ವಿವಿಧ “ ಕನ್ನಡ ಪುಸ್ತಕ ಸೊಗಸು ಬಹುಮಾನ”ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು/ ಮುದ್ರಕರು/ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ,ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಲಾಸ/ದೂರವಾಣಿ ಸಂಖ್ಯೆ- ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾರ್ಚ್, 29 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560 002 – ಈ ವಿಲಾಸಕ್ಕೆ ಕಲುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ,ಕನ್ನಡ ಭವನ,ಮೊದಲನೇ ಮಹಡಿ, ಜೆ,ಸಿ,ರಸ್ತೆ, ಬೆಂಗಳೂರು 560002-ವೆಬ್‍ಸೈಟ್ https://kpp.karnataka.gov.in ದೂರವಾಣಿ ಸಂಖ್ಯೆ: 080- 22482516- ನ್ನು ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...