alex Certify ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲು ನಮ್ಮ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲು ನಮ್ಮ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ಮೈಸೂರು : ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನು ನೀಡಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಫೆರಿಫೆರಲ್ ಕ್ಯಾನ್ಸರ್ ಕೇಂದ್ರ ಕಟ್ಟಡದ ಶಂಕುಸ್ಥಾಪನೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯ ಬಾಲಕಿಯರ ವಿದ್ಯಾರ್ಥಿ ನಿಲಯದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಮೈಸೂರಿಗೆ ಜಿಲ್ಲಾ ಆಸ್ಪತ್ರೆ, ಟ್ರಾಮಾ ಸೆಂಟರ್, ಕಿದ್ವಾಯಿ ಆಸ್ಪತ್ರೆ ಕೊಟ್ಟಿದ್ದು ನಾನೇ. ಈಗಾಗಲೇ ರೂ.40 ಕೋಟಿ ಕೂಡ ಕೊಟ್ಟಿದ್ದೇವೆ. ಇನ್ನೂ ರೂ.50 ಕೋಟಿ ಕೊಡುತ್ತೇವೆ. ನೆಫ್ರೋಲಜಿ ಕೇಂದ್ರ ಬೇಕು ಎನ್ನುವ ಬೇಡಿಕೆಯೂ ಇದೆ. ಅದನ್ನೂ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಕೈಗೊಳ್ಳುತ್ತೇವೆ.

ಡಾ.ಯತೀಂದ್ರ ಅವರ ಕೋರಿಕೆಯಂತೆ ಮೈಸೂರಿನಲ್ಲಿ ಬೋನ್ ಮ್ಯಾರೋ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇವೆ.
ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ನಗರ ಮೈಸೂರು. ಹೀಗಾಗಿ ಅಗತ್ಯ ಎಲ್ಲಾ ರೀತಿಯ ವೈದ್ಯಕೀಯ ಸವಲತ್ತುಗಳನ್ನೂ ಮೈಸೂರಿಗೆ ಒದಗಿಸಬೇಕಾಗಿದ್ದು ಇದಕ್ಕೆ ನಾನು ಬದ್ಧವಾಗಿದ್ದೇನೆ. ಬಡವರಿಗೆ, ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗಬಾರದು. ಉಚಿತ ಅಥವಾ ಕಡಿಮೆ ಖರ್ಚಿನಲ್ಲಿ ಇವರಿಗೆ ಆರೋಗ್ಯ, ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ. ನಮ್ಮ ಸರ್ಕಾರ ಇರುವಾಗ ಮೈಸೂರು ನಗರಕ್ಕೆ ಅಗತ್ಯ ಇರುವ ಎಲ್ಲಾ ನೆರವನ್ನೂ ಒದಗಿಸುತ್ತೇವೆ. ಪಾರಂಪರಿಕ ನಗರದ ಹೆಮ್ಮೆಯನ್ನು ನಾವು ಉಳಿಸುತ್ತೇವೆ. ಮೈಸೂರು ಜಿಲ್ಲೆಯ ಜನರ ಋಣ ತೀರಿಸಲು ನಾವು ಬದ್ಧರಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...