alex Certify BIG NEWS : ‘ಕಲ್ಯಾಣ ಕರ್ನಾಟಕ’ ದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಕಲ್ಯಾಣ ಕರ್ನಾಟಕ’ ದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘ಕಲ್ಯಾಣ ಕರ್ನಾಟಕ’ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಶನಿವಾರ ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ಇಂಧನ ಇಲಾಖೆ ಆಯೋಜಿಸಿದ ಪಂಚ ಗ್ಯಾರಂಟಿಯಲ್ಲಿ ಒಂದಾದ ಗರಿಷ್ಠ 200 ಯೂನಿಟ್ ಉಚಿತವಾಗಿ ಒದಗಿಸುವ ಉಚಿತ ಬೆಳಕು, ಸುಸ್ಥಿರ ಬದುಕು ಎಂಬ ಧ್ಯೇಯವಾಕ್ಯದ “ಗೃಹ ಜ್ಯೋತಿ” ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ 10 ಜನರಿಗೆ ಶೂನ್ಯ ದರದ ವಿದ್ಯುತ್ ಬಿಲ್ ನೀಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 371ಜೆ ಕಾಯ್ದೆ ತಿದ್ದುಪಡಿ ಮಾಡಿ ಈ ಭಾಗದಲ್ಲಿನ ಅಭಿವೃದ್ಧಿಗೆ ಹೊಸ ಭಾಷೆ ಬರೆದಿದ್ದರು. ಕಲ್ಯಾಣ ಕರ್ನಾಟಕಕ್ಕೆ 371ಜೆ ಸೌಲಭ್ಯ ನೀಡುವಲ್ಲಿ ಡಾ.ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರ ಪಾತ್ರ ದೊಡ್ಡದಾಗಿದೆ. ಲಾಲ್ ಕೃಷ್ಣ ಅಡ್ವಾಣಿಯವರು ದೇಶದ ಉಪಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ 371ಜೆ ಕಾಯ್ದೆ ತಿದ್ದುಪಡಿಗೆ ಇಚ್ಛಾಶಕ್ತಿ ತೋರಲಿಲ್ಲ. 371ಜೆ ದಿಂದಾಗಿ ಈ ಭಾಗದ ಅನೇಕ ಜನರು ಸರ್ಕಾರಿ ನೌಕರಿ, ಉನ್ನತ ಶಿಕ್ಷಣ ಪಡೆದುಕೊಳ್ಳಲು ಸಾಧ್ಯವಾಗಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಘೋಷಿಸಿರುವ 5,000 ಕೋಟಿ ರೂ ಅನುದಾನ ಇದೇ ವರ್ಷದಲ್ಲಿ ಖರ್ಚು ಮಾಡಿದಲ್ಲಿ, ಸಪ್ಲಿಮೆಂಟರಿ ಆಯವ್ಯಯದಲ್ಲಿ ಇನ್ನೂ ಹೆಚ್ಚು ಅನುದಾನ ನೀಡಲಾಗುವುದು ಎಂದರು.

ನಮ್ಮ ಸರ್ಕಾರದ ಹಿಂದಿನ ಅವಧಿಯ 5 ವರ್ಷದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 99,600 ಮನೆಗಳು ಸೇರಿದಂತೆ ರಾಜ್ಯದಾದ್ಯಂತ 14,42,000 ಮನೆಗಳನ್ನು ನಿರ್ಮಿಸಲಾಗಿತ್ತು. ಆದರೆ ಹಿಂದಿನ ಸರ್ಕಾರ ಐದು ವರ್ಷದಲ್ಲಿ ಕೇವಲ 3 ಲಕ್ಷ ಮಾತ್ರ ಮನೆ ನಿರ್ಮಾಣ ಮಾಡಿದ್ದು, ಅದರಲ್ಲಿ ಕೇವಲ 19,000 ಮನೆಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ನಿರ್ಮಿಸಿದೆ. ಹೈದ್ರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಕೇವಲ ಮರುನಾಮಕರಣ ಮಾಡಿದ್ದೇ ಹಿಂದಿನ ಸರ್ಕಾರದ ಕೊಡುಗೆ ಎಂದು ಸಿ.ಎಂ. ಸಿದ್ದರಾಮಯ್ಯ ತಿಳಿಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...