ಬೆಂಗಳೂರು: ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ಅವರ ವಿರುದ್ಧ ವಂಚನೆ, ನಕಲಿ ದಾಖಲೆ ಸೃಷ್ಟಿಸಿದ ಆರೋಪದಡಿ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎನ್.ಪಿ.ಎಸ್. ನೌಕರರ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಎಂ.ಎ. ನಾಗನಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. 2017 ರಿಂದ 2020 ರ ಅವಧಿಯಲ್ಲಿ ಶಾಂತರಾಮ್ ಖರ್ಚು ವೆಚ್ಚಗಳ ಬಿಲ್ ಗಳಿಗೆ ನನ್ನ ಸಹಿ ನಕಲು ಮಾಡಿ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ವಂಚಿಸಿದ್ದಾರೆ ಎಂದು ನಾಗನಗೌಡ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.