ಶಿವಮೊಗ್ಗ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2024- 25 ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರಿಂದ ಭತ್ತ ಖರೀದಿಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಸಾಮಾನ್ಯ ಭತ್ತ ಕ್ವಿಂಟಲ್ ಗೆ 2300 ರೂ., ಎ ಗ್ರೇಡ್ ಭತ್ತ ಕ್ವಿಂಟಲ್ ಗೆ 2320 ರೂ. ದರದಲ್ಲಿ ಖರೀದಿಸಲಾಗುತ್ತದೆ. ಕೃಷಿ ಇಲಾಖೆಯಿಂದ ಜಾರಿಗೊಳಿಸಲಾದ ಫ್ರೂಟ್ಸ್ ಐಡಿಯೊಂದಿಗೆ ಫೆಬ್ರವರಿ 28 ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ರೈತರಿಗೆ ಮಾಹಿತಿ ನೀಡಲಾಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ರೈತರಿಂದ ಭತ್ತ ಖರೀದಿಸಲು ಸಂಗ್ರಹಣಾ ಏಜೆನ್ಸಿಯಾಗಿ ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಮಹಾಮಂಡಲ ನೇಮಕ ಮಾಡಲಾಗಿದೆ. ನೋಂದಾಯಿಸಿಕೊಂಡ ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಲ್ ನಂತೆ ಗರಿಷ್ಠ 50 ಕ್ವಿಂಟಲ್ ಭತ್ತ ಖರೀದಿಸಲಾಗುವುದು. ಸಾಗರ ಎಪಿಎಂಸಿ ಆವರಣದಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲಾಗಿದ್ದು, ಮಾರ್ಚ್ 31ರವರೆಗೆ ತೆರೆದಿರುತ್ತದೆ ಎಂದು ಹೇಳಲಾಗಿದೆ.