alex Certify BIG NEWS : ಸರ್ಕಾರಿ ನೌಕರರ ‘ವರ್ಗಾವಣಾ ಮಾರ್ಗಸೂಚಿ’ ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸರ್ಕಾರಿ ನೌಕರರ ‘ವರ್ಗಾವಣಾ ಮಾರ್ಗಸೂಚಿ’ ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಸರ್ಕಾರದ ಅಪರ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಸರ್ಕಾರದ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ, ಮಾರ್ಗಸೂಚಿಗಳನ್ನು ನಿರ್ದಿಷ್ಟಡಿಸಲಾಗಿದೆ. ಸದರಿ ಆದೇಶದ ಕಂಡಿಕೆ 9(ಆ)ರಲ್ಲಿ ಈ ಕೆಳಗಿನಂತೆ ತಿಳಿಸಲಾಗಿರುತ್ತದೆ.

ಯಾವುದೇ ರೀತಿಯ ಅವಧಿಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಮತ್ತು ಮೇಲೆ ತಿಳಿಸಿರುವಂತೆ ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ ಮಾಡುವ ವರ್ಗಾವಣೆಗಳನ್ನು ಮಾಡುವ ಮುನ್ನ ಸಚಿವಾಲಯದ ಆಡಳಿತ ಇಲಾಖೆಗಳು ಮಾನ್ಯ ಮುಖ್ಯಮಂತ್ರಿಯವರ ಅನುಮೋದನೆಯನ್ನು ತಪ್ಪದೇ ಪಡೆಯತಕ್ಕದ್ದು,ಸರ್ಕಾರದ ಪುಧಾನ ಕಾರ್ಯದರ್ಶಿ/ಕಾರ್ಯದರ್ಶಿಯವರು ಯಾವುದೇ ಪುಸಂಗದಲ್ಲಿ ಮೊದಲು ವರ್ಗಾವಣೆಗಳನ್ನು ಮಾಡಿ ನಂತರ ಮಾನ್ಯ ಮುಖ್ಯಮಂತ್ರಿಯವರ ಸಿರೀಕರಣ/ಘಟನೋತ್ತರ ಅನುಮೋದನೆ ಪಡೆಯತಕ್ಕದ್ದಲ್ಲ.

ದಿನಾಂಕ:30.05.2023, 16.06.2023 ಮತ್ತು 30.06.2023ರ ಸರ್ಕಾರದ ಆದೇಶಗಳಲ್ಲಿ 2023-24ನೇ ಸಾಲಿಗೆ ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರತ್ನನ್ನು ಮೀರದಂತೆ ದಿನಾಂಕ:01.06.2023 ರಿಂದ 03.07.2023 ರವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದೆ ಎಂದು ಸೂಚನೆ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...