ಬೆಂಗಳೂರು: ವಿಧಾನಸಭೆ ಚುನಾವಣೆ ಕಾರ್ಯನಿರ್ವಹಣೆಗೆ ನಿಯೋಜನೆಗೊಂಡ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭತ್ಯೆಯನ್ನು ರಾಜ್ಯ ಸರ್ಕಾರ ಪರಿಷ್ಕರಣೆ ಮಾಡಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆ ಮತ್ತು ಅದಕ್ಕಿಂತ ಮೇಲ್ಪಟ್ಟ ಹುದ್ದೆಯಲ್ಲಿರುವ ಅಧಿಕಾರಿಗಳಿಗೆ 7,000 ರೂ. ನಿಗದಿ ಮಾಡಲಾಗಿದೆ. ಈ ಮೊದಲು 5000 ರೂ. ಭತ್ಯೆ ನಿಗದಿ ಮಾಡಲಾಗಿತ್ತು. ಅದನ್ನು ಪರಿಷ್ಕರಿಸಲಾಗಿದೆ.
ಪೊಲೀಸ್ ಇನ್ಸ್ಪೆಕ್ಟರ್ ಗಳಿಗೆ ಪ್ರತಿದಿನದಂತೆ 500 ರೂ ನಿಂದ 700 ರೂಪಾಯಿಗೆ ಭತ್ಯೆ ಪರಿಷ್ಕರಿಸಲಾಗಿದೆ. ಪೋಲಿಸ್ ಸಬ್ ಇನ್ಸ್ಪೆಕ್ಟರ್. ಎಎಸ್ಐ, ಹೆಡ್ ಕಾನ್ಸ್ಟೇಬಲ್, ಕಾನ್ಸ್ಟೇಬಲ್ ಗಳಿಗೆ 350 ರೂಪಾಯಿಯಿಂದ 500 ರೂಪಾಯಿಗೆ ಭತ್ಯೆ ಹೆಚ್ಚಳ ಮಾಡಲಾಗಿದೆ. ಹೋಂ ಗಾರ್ಡ್, ಫಾರೆಸ್ಟ್ ಗಾರ್ಡ್ ಸೇರಿದಂತೆ ಇತರೆ ಸಿಬ್ಬಂದಿಗೆ ಪ್ರತಿದಿನದಂತೆ 150 ರೂ.ನಿಂದ 250 ರೂ.ಗೆ ಚುನಾವಣಾ ಭತ್ಯೆ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.