![](https://kannadadunia.com/wp-content/uploads/2024/02/WhatsApp-Image-2024-02-28-at-7.45.40-PM.jpeg)
ಬೆಂಗಳೂರು : ಏಳನೇ ವೇತನ ಆಯೋಗ ಜಾರಿ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ. ಆಯೋಗದ ಅಂತಿಮ ವರದಿ ಬಂದ ನಂತರ ಖಂಡಿತ ಜಾರಿ ಮಾಡುತ್ತೇವೆ. ಈ ಬಗ್ಗೆ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನೌಕರರಿಗೆ ಅಭಯ ನೀಡಿದ್ದಾರೆ..