alex Certify ರಾಜ್ಯ ಸರ್ಕಾರದಿಂದ `ಆಸಿಡ್ ದಾಳಿ ಸಂತ್ರಸ್ತ ಮಹಿಳೆ’ಯರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯ ಸರ್ಕಾರದಿಂದ `ಆಸಿಡ್ ದಾಳಿ ಸಂತ್ರಸ್ತ ಮಹಿಳೆ’ಯರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ

ಬೆಂಗಳೂರು : ಆ್ಯಸಿಡ್ ಸಂತ್ರಸ್ತ ಮಹಿಳೆಯರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು,  ಆಸಿಡ್ ದಾಳಿ ಸಂತ್ರಸ್ತರಿಗೆ ಬಡ್ಡಿ ರಹಿತ 5 ಲಕ್ಷ ರೂ. ಸಾಲ ಸೌಲಭ್ಯ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ನಾಡಿನ ಮಹಿಳೆಯರು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ವಲಯದಲ್ಲಿ ಮುಕ್ತವಾಗಿ ಭಾಗವಹಿಸುವ ಅವಕಾಶ ಮತ್ತು ಸುರಕ್ಷಿತ ವಾತಾವರಣವನ್ನು ಒದಗಿಸಲು ನಮ್ಮ ಸರ್ಕಾರವು ಬದ್ಧವಾಗಿದೆ. ಮಹಿಳೆಯರ ಸುರಕ್ಷತೆಗಾಗಿ 6 ನೂತನ ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವ ಮತ್ತು ಆಸಿಡ್ ದಾಳಿ ಸಂತ್ರಸ್ತ ಮಹಿಳೆಯರಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ರೂ. 5 ಲಕ್ಷದ ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ ಕಲ್ಪಿಸುವುದಾಗಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿ, ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಸ್ತ್ರೀ ಶಕ್ತಿ ಆರಾಧನೆಯ ಈ ನವರಾತ್ರಿಯ ಶುಭ ಸಂದರ್ಭದಲ್ಲಿ ನಮ್ಮ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಬದ್ಧವಾಗಿದ್ದು, ಮಹಿಳೆಯರ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...